ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಗೆ ಬಿಗ್ ರಿಲೀಫ್ ಸಿಕ್ಕಿದೆ.
ಬಾಂಡ್ ಮೂಲಕ ಸುಲಿಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಹಲವರ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಫ್ ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಅ.22 ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಕೋರ್ಟ್ ಆದೇಶ ನೀಡಿದೆ.