ಸೂಪರ್ ಸ್ಟಾರ್ ರಜನೀಕಾಂತ್ (Rajanikanth) ಆರೋಗ್ಯದಲ್ಲಿ ಏರುಪೇರಾಗಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಮ್ಮ ನೆಚ್ಚಿನ ನಟ ಆಸ್ಪತ್ರೆಗೆ ದಾಖಲಾಗಿದ್ದ ಸುದ್ದಿ ಕೇಳಿ ಅಭಿಮಾನಿಗಳು ಬೇಸರ ಹಾಗ ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ, ಈಗ ಅವರು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.
ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಜನಿಕಾಂತ್ರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಸೂಕ್ತ ಚಿಕಿತ್ಸೆ ಕೂಡ ನೀಡಲಾಗಿದೆ. ಇದೀಗ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. 73 ವರ್ಷದ ತಲೈವಾ ಅನಾರೋಗ್ಯದ ಸುದ್ದಿ ಕೇಳಿ ಆತಂಕಕ್ಕೆ ಒಳಗಾಗಿದ್ದ ಅಭಿಮಾನಿಗಳಿಗೆ ರಜನಿಕಾಂತ್ ಪತ್ನಿ ಲತಾ (Latha) ಸ್ಪಷ್ಟನೆ ನೀಡಿದ್ದಾರೆ. ತಲೈವಾ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ತಲೈವಾ ನಟನೆಯ ಅಕ್ಟೋಬರ್ 10ರಂದು ರಜನಿಕಾಂತ್ ನಟನೆಯ ’ವೆಟ್ಟೈಯಾನ್’ (Vettaiyan) ಸಿನಿಮಾ ಬಿಡುಗಡೆ ಆಗಲಿದೆ.