ರಾಜ್ಯದಲ್ಲಿ ಮುಂಗಾರು ಮಳೆ ಉತ್ತಮವಾಗಿದೆ. ಈಗ ಹಿಂಗಾರು ಕೂಡ ಉತ್ತಮವಾಗಿ ಸುರಿಯುವ ಲಕ್ಷಣ ಗೋಚರವಾಗುತ್ತಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಶುಕ್ರವಾರ ಕೂಡ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುಡುಗು, ಸಿಡಿಲನೊಂದಿಗೆ ಕೆಲವು ಜಿಲ್ಲೆಗಳಲ್ಲಿ ಈಗ ಮಳೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಉತ್ತರ ಒಳನಾಡಿನ ಕೊಪ್ಪಳ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ದಕ್ಷಿಣ ಒಳನಾಡು ಹಾಗೂ ಮಲೆನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈಗಾಗಲೇ ಹಲವು ಜಿಲ್ಲೆಗಳಲ್ಲಿ ಗುರುವಾರ ವ್ಯಾಪಕ ಮಳೆಯಾಗಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೂಡ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.








