ಚಂಡೀಗಢ: ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರ ಮೇಲೆ ಗುಂಡಿನ ದಾಳಿ ನಡೆದಿರುವ ಘಟನೆ ನಡೆದಿದೆ.
ಪಂಜಾಬ್ ನ ಫಾಜಿಲ್ಕಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಎಎಪಿ ಮುಖಂಡನೊಂದಿಗೆ ವಾಗ್ವಾದದ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ನಾಯಕ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.
ಬುಲೆಟ್ನಿಂದ ಗಾಯಗೊಂಡ ಸ್ಥಳೀಯ ಎಎಪಿ ನಾಯಕ ಮನದೀಪ್ ಸಿಂಗ್ ಬ್ರಾರ್ ಅವರನ್ನು ಕೂಡಲೇ ಜಲಾಲಾಬಾದ್ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಅವರ ಗಂಭೀರ ಸ್ಥಿತಿಯನ್ನು ನೋಡಿ ಹೆಚ್ಚಿನ ಚಿಕಿತ್ಸೆಗಾಗಿ ಲುಧಿಯಾನದ ಜಿಲ್ಲಾ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿದೆ.
ಬುಲೆಟ್ ನ್ನು ಅಕಾಲಿ ನಾಯಕ ವರದೇವ್ ಸಿಂಗ್ ಮಾನ್ ಹಾರಿಸಿದ್ದಾರೆ ಎಂದು ಜಲಾಲಾಬಾದ್ ಎಎಪಿ ಶಾಸಕ ಜಗದೀಪ್ ಕಾಂಬೋಜ್ ಗೋಲ್ಡಿ ಆರೋಪಿಸಿದ್ದಾರೆ. ಈ ಕುರಿತು ಆಪ್ ಆಕ್ರೋಶ ವ್ಯಕ್ತಪಡಿಸಿದೆ. ಗುಂಡು ಹಾರಿಸಿದ ನಾಯಕನ ಮೇಲೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ.








