ಬೈರೂತ್: ಗಾಜಾದಲ್ಲಿನ (Gaza) ಮಸೀದಿಯ (Mosque) ಮೇಲೆ ಇಸ್ರೇಲ್ (Israel) ವಾಯುಪಡೆ ವೈಮಾನಿಕ ದಾಳಿ ನಡೆಸಿದ್ದು, 26 ಜನ ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ಹೇಳಿದೆ.
ಸೆಂಟ್ರಲ್ ಡೀರ್ ಅಲ್-ಬಲಾಹ್ನಲ್ಲಿನ ಮಸೀದಿಯೊಂದರಲ್ಲಿ ಜನರು ಆಶ್ರಯ ಪಡೆದಿದ್ದರು. ಇದರ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಪರಿಣಾಮ ಅದರಲ್ಲಿದ್ದ 26 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ನಾವು ಹಮಾಸ್ ಉಗ್ರರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದೇವೆ ಎಂದು ಹೇಳಿಕೊಂಡಿದೆ. ಮಸೀದಿಯಲ್ಲಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಮಾಸ್ (Hamas) ಭಯೋತ್ಪಾದಕರ ಮೇಲೆ ನಿಖರವಾದ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಸೇನೆ ಹೇಳಿದೆ.
ಶನಿವಾರ ಬೈರೂತ್ ಮೇಲೆ ಇಸ್ರೇಲ್ ನಡೆಸಿದ ವಾಯುದಾಳಿಗೆ ಹಿಜ್ಬುಲ್ಲಾ ಬಂಡುಕೋರ ಸಂಘಟನೆಯ ನಾಯಕ ಹಾಗೂ ನಸ್ರಲ್ಲಾನ ಸಂಭಾವ್ಯ ಉತ್ತರಾಧಿಕಾರಿ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.








