ನವದೆಹಲಿ: ಹರಿಯಾಣ (Haryana Election Results) ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಫೈಟ್ ಶುರುವಾಗಿದೆ.
ಆರಂಭದಲ್ಲಿ ಕಾಂಗ್ರೆಸ್ (Congress) ಮುನ್ನಡೆಯಲ್ಲಿದ್ದರೆ ಈಗ ಬಿಜೆಪಿ (BJP) ಅಲ್ಪ ಮುನ್ನಡೆ ಸಾಧಿಸಿದೆ. ಬೆಳಗ್ಗೆ 10 ಗಂಟೆಯ ಟ್ರೆಂಡ್ ವೇಳೆ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ 46 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 41 ಕ್ಷೇತ್ರ ಹಾಗೂ ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಹರಿಯಾಣದಲ್ಲಿ 90 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಬಹುಮತಕ್ಕೆ 46 ಸ್ಥಾನಗಳ ಅಗತ್ಯವಿದೆ. ಬಿಜೆಪಿ 2014 ರಿಂದ ಅಧಿಕಾರದಲ್ಲಿತ್ತು. 2014ರ ಚುನಾವಣೆಯಲ್ಲಿ ಬಿಜೆಪಿ 47 ರಲ್ಲಿ ಜಯಗಳಿಸಿದರೆ ಕಾಂಗ್ರೆಸ್ 15 ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು.
2019 ರ ಚುನಾವಣೆಯಲ್ಲಿ ಬಿಜೆಪಿ 40, ಕಾಂಗ್ರೆಸ್ 31, ದುಶ್ಯಂತ್ ಚೌಟಾಲ ವಾರ ಜೆಜಪಿ 10 ಸ್ಥಾನವನ್ನು ಗೆದ್ದುಕೊಂಡಿತ್ತು. ನಂತರ ಬಿಜೆಪಿ ಮತ್ತು ಜೆಜೆಪಿ ಮೈತ್ರಿ ಮಾಡಿಕೊಂಡು ಅಧಿಕಾರ ಪಡೆದಿತ್ತು. ಈ ಬಾರಿ ಇಂಡಿಯಾ ಒಕ್ಕೂಟ ಗೆಲ್ಲುವ ತವಕದಲ್ಲಿದೆ.








