ಬೆಂಗಳೂರು: ಕಿಲ್ಲರ್ ಬಿಎಂಟಿಸಿ (BMTC Bus) ಮತ್ತೊಂದು ಬಲಿ ಪಡೆದಿದೆ.
ಬಸ್ ಗೆ ಬೈಕ್ ಡಿಕ್ಕಿಯಾದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ನಗರದ ಉಲ್ಲಾಳ ಕೆರೆಯ ಹತ್ತಿರ ಸಂಭವಿಸಿದೆ.
ಮೋನಿಕಾ(25) ಸಾವನ್ನಪ್ಪಿರುವ ಮಹಿಳೆ. ಬಿಎಂಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದ ನಂತರ ಮಹಿಳೆ ಬಸ್ ನ ಬಲಭಾಗಕ್ಕೆ ಬಿದ್ದಿದ್ದಾರೆ. ಆಗ ಎದುರುಗಡೆಯಿಂದ ಬರುತ್ತಿದ್ದ ಕಾರು, ಬಸ್‌ಗೆ ಗುದ್ದಿ ರಸ್ತೆಯಲ್ಲಿ ಬಿದ್ದ ಮಹಿಳೆಯ ಮೇಲೆ ಹರಿದಿದೆ. ಘಟನೆಯಲ್ಲಿ ಬೈಕ್ ನಜ್ಜುಗುಜ್ಜಾಗಿದ್ದು, ಮಹಿಳೆ ಸಾವನ್ನಪ್ಪಿದ್ದಾರೆ.
ಮೋನಿಕಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಕ್ಕೆ ಹೋಗುವಾಗ ಘಟನೆ ಸಂಭವಿಸಿದೆ. ಘಟನೆಯಲ್ಲಿ ನಮ್ಮದು ತಪ್ಪಿಲ್ಲ ಎಂದ ಚಾಲಕ ಸುರೇಶ್ ಹೇಳಿದ್ದಾರೆ. ಘಟನೆ ಸಂಬಂದ ಮೃತ ಮಹಿಳೆ ಮೋನಿಕಾ ಸಂಬಂಧಿಕರು ಕೊಟ್ಟ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಬಿಎಂಟಿಸಿ ಬಸ್ ಹಾಗೂ ಕಾರನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.








