ಬೆಂಗಳೂರು: ದೇಶದಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕ್ ಪ್ರಜೆಗಳನ್ನು ಬಂಧಿಸುವ ಕಾರ್ಯ ಮುಂದುವರೆದಿದ್ದು, ಈಗ ಮತ್ತೆ ಪಾಕಿಸ್ತಾನ (Pakistan) ಮೂಲದ ಪ್ರಜೆಗಳನ್ನು ಬಂಧಿಸಲಿಗದೆ.
14 ಜನರನ್ನು ಜಿಗಣಿ ಪೊಲೀಸರು (Jigani Police) ಬಂಧಿಸಿದ್ದಾರೆ. ಪ್ರಕರಣದ ಕಿಂಗ್ ಪಿನ್ ಪರ್ವೇಜ್ ಅರೆಸ್ಟ್ ಆದ ಬೆನ್ನಲ್ಲೇ ಆರೋಪಿಗಳನ್ನು ಅರೆಸ್ಟ್ ಮಾಡಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು 22 ಜನ ಪಾಕ್ ಪ್ರಜೆಗಳನ್ನು ಅರೆಸ್ಟ್ ಮಾಡಲಾಗಿದೆ. ಈ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆ ಇದೆ.
ಪಾಕ್ ಪ್ರಜೆಗಳ ಬಂಧನಕ್ಕೆ ಚೆನ್ನೈ, ದೆಹಲಿ, ಹೈದರಾಬಾದ್ ಪೊಲೀಸರ ತಂಡ ತೆರಳಿತ್ತು. ಮೆಹದಿ ಫೌಂಡೇಷನ್ ಸಂಪರ್ಕದಲ್ಲಿದ್ದ 22 ಜನ ಧರ್ಮ ಪ್ರಚಾರಕ್ಕಾಗಿ ವಿವಿಧ ರಾಜ್ಯಗಳಲ್ಲಿ ತಂಗಿದ್ದರು ಎನ್ನಲಾಗಿದೆ.








