ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಐದು ವರ್ಷ ಅವರೇ ಸಿಎಂ ಆಗಿರುತ್ತಾರೆ ಎಂದು ಮೈಸೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದೇವಪ್ಪ ಅವರ ಮನೆಯಲ್ಲಿ ಯಾವುದೇ ಮೀಟಿಂಗ್ ಇಲ್ಲ. ನಾವೆಲ್ಲ ಸೇರಿ ಊಟ ಮಾಡಿದ್ದೇವೆ ಅಷ್ಟೆ. ಮೈಸೂರಿನ ಆತಿಥ್ಯ ಬಿಡುವುದಕ್ಕೆ ಆಗುತ್ತಾ? ಹೀಗಾಗಿ ಊಟಕ್ಕೆ ಹೋಗಲಾಗಿತ್ತು. ಅದಕ್ಕೆ ಯಾವುದೇ ಅರ್ಥ ಕಲ್ಪಿಸುವುದು ಬೇಡ. ನಾನು, ಸತೀಶ್ ಜಾರಕಿಹೊಳಿ, ಮಹದೇವಪ್ಪ, ಶಾಸಕ ಎ.ಆರ್ ಕೃಷ್ಣ ಮೂರ್ತಿ ಸೇರಿ ಊಟ ಮಾಡಿದ್ದೇವೆ. ಆ ವೇಳೆ ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ಸಿಎಂ ಬದಲಾವಣೆ ಇಲ್ಲ ಎಂದಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯ ಇಲ್ಲ. ನಾವು ಅವಾಗ ಅವಾಗವಾಗಿ ಹೀಗೆ ಸೇರುತ್ತಿರುತ್ತೇವೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ದಲಿತ ಸಿಎಂ ಚರ್ಚೆಯೂ ಇಲ್ಲ.
ಕೋಳಿವಾಡ ಹೇಳಿಕೆ ವೈಯಕ್ತಿಕ ಹೇಳಿಕೆ ನೀಡಿದ್ದಾರೆ. ಹರಿಯಾಣ ಸೋಲಿಗೆ ಅಲ್ಲಿನ ಬೇರೆ ಕಾರಣ ಇದೆ. ಅದನ್ನು ಹೈಕಮಾಂಡ್ ವಿಶ್ಲೇಷಣೆ ಮಾಡುತ್ತದೆ. ಮುಡಾ ಹಗರಣದ ವಿಚಾರ ಮೈಸೂರಿನವರಿಗೇ ಗೊತ್ತಿಲ್ಲ. ಹರಿಯಾಣದ ಮೇಲೆ ಹೇಗೆ ಪರಿಣಾಮ ಬೀರುತ್ತೆ ಎಂದು ಪ್ರಶ್ನಿಸಿದ್ದಾರೆ.








