ಸಂಜು ವೆಡ್ಸ್ ಗೀತಾ-2 (Sanju Weds Geetha 2) ಚಿತ್ರದ ಹಾಡಿನ ಬಿಡುಗಡೆ ಸಂಭ್ರಮ ಇತ್ತೀಚೆಗಷ್ಟೇ ನಡೆಯಿತು. ಈ ವೇಳೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಸೊಂಟ ಬಳುಕಿಸಿದರು.
ಇದಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಛಲವಾದಿ ಮಹಾಸಭಾದ ಜ್ಞಾನಪ್ರಕಾಶ ಸ್ವಾಮೀಜಿ ಅವರೊಂದಿಗೆ ನಟಿ ರಾಗಿಣಿ ಹಾಡು ಬಿಡುಗಡೆ ಮಾಡಿದರು.
ಈ ವೇಳೆ ಮಾತನಾಡಿದ ನಾಯಕ ಶ್ರೀನಗರ ಕಿಟ್ಟಿ, ಮೊದಲ ಬಾರಿಗೆ ಒಬ್ಬ ರೇಶ್ಮೆ ಬೆಳೆಗಾರನಾಗಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಈಗಾಗಲೇ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ನಾಗಶೇಖರ್ ಅವರ ಪ್ಯಾಟ್ರನ್ ಅಲ್ಲದೆ ಇರುವ ಈ ಹಾಡಲ್ಲಿ ನಾನು, ರಚಿತಾರಾಮ್, ರಾಗಿಣಿ ದ್ವಿವೇದಿ ಅಭಿನಯಿಸಿದ್ದೇವೆ ಎಂದಿದ್ದಾರೆ.
ವಿಶೇಷ ಪಾತ್ರದಲ್ಲಿ ನಟ ಚೇತನ್ ಚಂದ್ರ, ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ. ಸತ್ಯ ಹೆಗಡೆ ಅವರ ಛಾಯಾಗ್ರಹಣ, ಶ್ರೀಧರ್ ವಿ. ಸಂಭ್ರಮ್ ಅವರ ಸಂಗೀತ ನಿರ್ದೇಶನ, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ, ರಾಗಿಣಿ ದ್ವಿವೇದಿ, ಚೇತನ್ ಚಂದ್ರ, ರಂಗಾಯಣ ರಘು, ಸಾಧು ಕೋಕಿಲ, ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಸೇರಿದಂತೆ ಹಲವರು ನಟಿಸಿದ್ದಾರೆ.