ನವದೆಹಲಿ: ಖ್ಯಾತ ಉದ್ಯಮಿ ರತನ್ ಟಾಟಾ ಇಹಲೋಕ ತ್ಯಜಿಸಿದ್ದು, ಅವರಿಗೆ ಮರಣೋತ್ತರ ಭಾರತ ರತ್ನ (Bharata Ratna) ನೀಡುವಂತೆ ಮಹಾರಾಷ್ಟ್ರ ಸರ್ಕಾರ ಶಿಫಾರಸು ಮಾಡಿದೆ.
ಇಂದು ನಡೆದ ಮಹಾರಾಷ್ಟ್ರ ಸಚಿವ ಸಂಪುಟದಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಮುಖ್ಯಮಂತ್ರಿ ಏಕನಾಥ್ ಶಿಂಧೆ (Ekanath Shindhe) ನೇತೃತ್ವದಲ್ಲಿ ಸಭೆ ನಡೆತಿತ್. ಈ ವೇಳೆ ಸಚಿವರು ಶ್ರದ್ಧಾಂಜಲಿ ಸಲ್ಲಿಸಿದ್ದರು.
ಈ ಕುರಿತು ಸಿಎಂ ಏಕನಾಥ್ ಶಿಂಧೆ ಎಕ್ಸ್ ನಲ್ಲಿ ಪೋಸ್ಟ್ ಹಾಕಿದ್ದು, ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಹಾಗೆಯೇ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರುವ ಪ್ರಸ್ತಾವನೆ ಅನುಮೋದಿಸಲಾಗಿದೆ ಎಂದು ಹೇಳಿದ್ದಾರೆ.
ಹೊಸ ಕೈಗಾರಿಕೆಗಳನ್ನು ನಿರ್ಮಿಸುವುದರ ಜೊತೆಗೆ ದೇಶವನ್ನು ಮುಂದಕ್ಕೆ ಕೊಂಡೊಯ್ಯಬಹುದು. ಆದರೆ ಅದಕ್ಕೆ ನಿಜವಾದ ದೇಶಭಕ್ತಿ ಮತ್ತು ಸಮಾಜದ ಬಗ್ಗೆ ಪ್ರಾಮಾಣಿಕ ಕಾಳಜಿಯ ಅಗತ್ಯವಿರುತ್ತದೆ. ಟಾಟಾ ಈ ಗುಣಗಳನ್ನು ಹೊಂದಿದ್ದರು. ಉದ್ಯಮ ಕ್ಷೇತ್ರ ಮಾತ್ರವಲ್ಲದೆ, ಸಾಮಾಜಿಕ ಅಭಿವೃದ್ಧಿಯ ಕಾರ್ಯದಲ್ಲೂ ಅವರ ಕೊಡುಗೆ ಅಸಾಧಾರಣವಾದ ಸಾಧನೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಹೀಗಾಗಿ ಅವರಿಗೆ ಕೇಂದ್ರ ಸರ್ಕಾರ ಮರಣೋತ್ತರ ಭಾರತ ರತ್ನ ನೀಡಬೇಕು ಎಂದು ಮನವಿ ಮಾಡಲಾಗಿದೆ.