ರಾಮನಗರ: ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ದನದ ಕೊಟ್ಟಿಗೆಯಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಾಜು(34) ಮತ್ತು ಲಕ್ಷ್ಮೀ(30) ಆತ್ಮಹತ್ಯೆ ಮಾಡಿಕೊಂಡ ದಂಪತಿ. ರಾಜು ಹೆಚ್ಚಿನ ಸಾಲ ಮಾಡಿಕೊಂಡಿದ್ದರಿಂದಾಗಿ ಮಾನಸಿಕವಾಗಿ ನೊಂದಿದ್ದರು. ಹೀಗಾಗಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಜು ಹಾಗೂ ಲಕ್ಷ್ಮೀ ಕಳೆದ ಐದು ವರ್ಷದ ಹಿಂದೆ ಮದುವೆಯಾಗಿದ್ದರು. ಈ ದಂಪತಿಗೆ ಮೂರು ವರ್ಷದ ಮಗು ಇದೆ. ರಾಜು ದಂಪತಿಯ ತಂದೆ, ತಾಯಿ ಧರ್ಮಸ್ಥಳಕ್ಕೆ ಹೋಗಿದ್ದ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಅಕ್ಕೂರು ಠಾಣೆ ಪೊಲೀಸರು ಭೇಟಿ ನೀಡಿ, ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.