ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲುಪಾಲಾಗಿರುವ ನಟ ದರ್ಶನ್ ಗೆ ಜಾಮೀನು ಸಿಗುತ್ತಿಲ್ಲ. ಹೀಗಾಗಿ ನಟ ದರ್ಶನ್ (Darshan) ಜಾಮೀನು (Bail) ಕೋರಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ನಟ ದರ್ಶನ್, ತುರ್ತು ವಿಚಾರಣೆ ಮಾಡುವಂತೆ ಕೋರಿ ಮೆಮೋ ಹಾಕಿದ್ದಾರೆ. ಅಕ್ಟೋಬರ್ 22ರಂದು ದರ್ಶನ್ ಜಾಮೀನು ಅರ್ಜಿಯನ್ನು ಹೈಕೋರ್ಟ್ (High Court) ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ ಎನ್ನಲಾಗಿದೆ. ಪವಿತ್ರಾಗೌಡ (Pavithra Gowda) ಕೂಡ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇನ್ನಿತರ ಆರೋಪಿಗಳಾಗಿರುವ ಅನುಕುಮಾರ್, ಪ್ರದೋಷ್ ಮತ್ತು ವಿನಯ್ ಅರ್ಜಿಗಳನ್ನು ಸೆಷನ್ಸ್ ಕೋರ್ಟ್ ವಜಾ ಮಾಡಿದೆ.
ಕೋರ್ಟ್ ಜಾಮೀನು ಮಂಜೂರು ಮಾಡಿ ಮೂರು ದಿನ ಕಳೆದರೂ ಪರಪ್ಪನ ಅಗ್ರಹಾರದಲ್ಲಿರುವ ದೀಪಕ್, ತುಮಕೂರು ಜೈಲಿನಲ್ಲಿರುವ ರವಿಶಂಕರ್ ಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.