ಕಲಬುರಗಿ: ಸರಣಿ ಅಪಘಾತಕ್ಕೆ ನಾಲ್ವರು ಬಲಿಯಾಗಿರುವ ಘಟನೆ ನಡೆದಿದೆ.
ತಾಲೂಕಿನ ಹಸನಾಪುರ ಹತ್ತಿರ ಈ ಭೀಕರ ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಬೈಕ್, ಕಾರು ಮತ್ತು ಲಾರಿ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ. ಬೈಕ್ ಮತ್ತು ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ರಾಘವೇಂದ್ರ (35), ಮುಜಾಹಿದ್ (30), ಹುಸೇನ್ ಬಿ (45) ಮೌಲಾಬಿ (50) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೈಕ್ ನಲ್ಲಿದ್ದ ಪರಮಾನಂದ ಹಾಗೂ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಂಧಗಿಯಿಂದ ಚಿತ್ತಾಪುರದ ಕಡೆಗೆ ಹೊರಟಿದ್ದ ಬೈಕ್ ಲಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿ ಚಕ್ರಕ್ಕೆ ಬೈಕ್ ಸಿಲುಕಿದೆ. ಈ ವೇಳೆ ವೇಗವಾಗಿ ಬಂದ ಕಾರು, ಲಾರಿಗೆ ಡಿಕ್ಕಿ ಹೊಡೆದ ಹಿನ್ನಲೆಯಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.
ಮೃತರು ರಾಯಚೂರು ಜಿಲ್ಲೆಯ ಹಟ್ಟಿ ಗ್ರಾಮಕ್ಕೆ ಕಾರಲ್ಲಿ ತೇರಳುತ್ತಿದ್ದರು. ಸ್ಥಳಕ್ಕೆ ಕಲಬುರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.