ಬೆಂಗಳೂರು: ವ್ಯಕ್ತಿಯೊಬ್ಬ ಪತ್ನಿಯ ಶೀಲ ಶಂಕಿಸಿ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹತ್ಯೆ ಮಾಡಿದ ನಂತರ ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ (Bengaluru) ಆರ್ ಬಿಐ ಲೇಔಟ್ ಹತ್ತಿರದ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ.
ನಿರ್ಮಾಣ ಹಂತದ ಕಟ್ಟಡದಲ್ಲಿ ಮರದ ತುಂಡಿನಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನ ಮೇಲೆ ಹಲ್ಲೆ ನಡೆಸಿ, ಪತಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಆನಂತರ ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದೆ.
ಈ ಘಟನೆ ಬೆಂಗಳೂರಿನ ಕೋಣನಕುಂಟೆ (Konanakunte) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.