ಬೆಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ನಗರದ ಔಟರ್ ರಿಂಗ್ ರೋಡ್ ನ ದೇವಿನಗರ ಬಸ್ ನಿಲ್ದಾಣದ ಹತ್ತಿರ ನಡೆದಿದೆ. ಬುಧವಾರ ಮಧ್ಯರಾತ್ರಿ 1 ಗಂಟೆ ವೇಳೆ ಬರುತ್ತಿದ್ದ ಇಬ್ಬರು ಯುವಕರು ಬಿಇಎಲ್ ಕಡೆಯಿಂದ ಹೆಬ್ಬಾಳಕ್ಕೆ (Hebbal) ತೆರಳುತ್ತಿದ್ದರು. ಒಬ್ಬ ಸೊಂಟಕ್ಕೆ ಟೂಲ್ಸ್ ಸಿಕ್ಕಿಸಿಕೊಂಡಿದ್ದ. ಔಟರ್ ರಿಂಗ್ ರೋಡ್ನ ದೇವಿನಗರ ಬಸ್ ನಿಲ್ದಾಣ ಬಳಿ ಚಾಲಕನ ನಿಯಂತ್ರಣ ತಪ್ಪಿದ್ದು, ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಇದರಿಂದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಹೆಬ್ಬಾಳ ಪೊಲೀಸರು (Hebbal Police) ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಪರಿಶೀಲನೆ ವೇಳೆ ಯುವಕನೊಬ್ಬನ ಸೊಂಟದಲ್ಲಿ ಚಾಕು ಪತ್ತೆಯಾಗಿದೆ. ಹೀಗಾಗಿ ಚಾಕು ತೋರಿಸಿ ಕಳ್ಳತನ ಮಾಡುತ್ತಿದ್ದವರೇ ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.