ಪಾಟ್ನಾ: ಕಳ್ಳಭಟ್ಟಿ ಸೇವಿಸಿದ ಪರಿಣಾಮ 20 ಜನರು ಸಾವನ್ನಪ್ಪಿರುವ ಘಟನೆ ಬಿಹಾರ (Bihar) ದ ಸಿವಾನ್ ಮತ್ತು ಸರನ್ ಜಿಲ್ಲೆಯಲ್ಲಿ ನಡೆದಿದೆ.
ಕಳ್ಳಭಟ್ಟಿ (Liquior) ಸೇವಿಸುತ್ತಿದ್ದಂತೆ 6 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ, 12 ಜನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸಿವಾನ್ ಜಿಲ್ಲೆಯ ಮ್ಯಾಜಿಸ್ಟ್ರೇಟ್ ಮುಕುಲ್ ಕುಮಾರ್ ಗುಪ್ತಾ ಮಾತನಾಡಿ, ಮಘಾರ್ ಮತ್ತು ಔರಿಯಾ ಪಂಚಾಯತ್ ವ್ಯಾಪ್ತಿಯಲ್ಲಿ ಮೂವರು ಸಾವನ್ನಪ್ಪಿದ್ದು, ಬೆಳಗ್ಗೆ ಮಾಹಿತಿ ಲಭಿಸಿದೆ ಎಂದಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿಯ ಬಳಿಕ ಸಾವಿಗೆ ನಿಖರ ಕಾರಣ ಏನು ಎಂಬುವುದನ್ನು ತಿಳಿಸಲಾಗುವುದು ಎಂದರು. ಸದ್ಯ ಎರಡು ಜಿಲ್ಲೆಯಲ್ಲಿ ಆಡಳಿತ ಮಂಡಳಿಯು ತನಿಖೆ ನಡೆಸುತ್ತಿದೆ. ಜೊತೆಗೆ ಮಘಾರ್ ಮತ್ತು ಔರಿಯಾ ಪಂಚಾಯಿತಿ ವ್ಯಾಪ್ತಿಯ ಇಬ್ಬರು ಚೌಕಿದಾರ್ರನ್ನು ಇಲಾಖೆ ಅಮಾನತು ಮಾಡಿದೆ.
2016ರಿಂದ ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆ ನಿಷೇಧಿಸಲಾಗಿದೆ. ನಿಷೇಧಿಸಿದ ನಂತರ ಅಕ್ರಮ ಮದ್ಯ ಸೇವನೆಯಿಂದ 150ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ಬಿಹಾರ ಸರ್ಕಾರ ಹೇಳಿದೆ.