ಚಿಕ್ಕೋಡಿ: ಬೈಕ್ ಸ್ಕಿಡ್ ಆಗಿ ನದಿಗೆ ಬಿದ್ದ ಪರಿಣಾಮ ದಂಪತಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಈ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೊಗನಿಹಾಳ ಗ್ರಾಮದ ಘಟಪ್ರಭಾ ನದಿಗೆ (Ghataprabha River) ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಮೇಲೆ ನಡೆದಿದೆ. ಘೋಡಗೇರಿ ಗ್ರಾಮದಿಂದ ಪೊಗತ್ಯಾನಟ್ಟಿ ಗ್ರಾಮಕ್ಕೆ ದಂಪತಿ ಬೈಕ್ ಮೇಲೆ ತೆರಳುತ್ತಿದ್ದ ಸಂದರ್ಭದಲ್ಲಿ ಗ್ರಾಮದ ಬಳಿ ಸೇತುವೆ ದಾಟುವಾಗ ಬೈಕ್ ಸ್ಕಿಡ್ ಆಗಿ ನದಿಗೆ ಬಿದ್ದಿದೆ.
ಆಗ ದಂಪತಿಗಳು ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದ ಸುರೇಶ ಬಡಿಗೇರ (53), ಜಯಶ್ರೀ ಬಡಿಗೇರ(45) ಸಾವನ್ನಪ್ಪಿರುವ ದಂಪತಿ. ನದಿಯಲ್ಲಿನ ಜಯಶ್ರೀ ಶವವನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಸುರೇಶ ಶವಕ್ಕಾಗಿ ಹುಡುಕಾಟ ನಡೆಯುತ್ತಿದೆ.
ಸೇತುವೆಗೆ (Bridge) ತಡೆಗೋಡೆ ನಿರ್ಮಿಸದೇ ನೀರಾವರಿ ಇಲಾಖೆಯ ನಿರ್ಲಕ್ಷ್ಯ ಮಾಡಿದ್ದರಿಂದಾಗಿ ಈ ಘನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.