ನಟಿ ಅಮೂಲ್ಯ ಅವರ ಸಹೋದರ ದೀಪಕ್ ಅರಸ್ (46) ಅನಾರೋಗ್ಯದಿಂದಾಗಿ ಸಾವನ್ನಪ್ಪಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ದೀಪಕ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರು ಮನಸಾಲಜಿ, ಶುಗರ್ ಫ್ಯಾಕ್ಟರಿ ಸಿನಿಮಾಗಳನ್ನು ನಿರ್ದೇಶಿಸಿದ್ದರು.
ಆದರೆ, ಹಲವು ದಿನಗಳಿಂದಲೂ ಕಿಡ್ನಿ ವೈಫಲ್ಯದಿಂದಾಗಿ ಬಳಲುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ದೀಪಕ್ ಅರಸ್ ಅವರಿಗೆ ಮದುವೆ ಆಗಿ ಇಬ್ಬರು ಮಕ್ಕಳಿದ್ದರು. ವಯಾಲಿ ಕಾವಲ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.