ಮುಂಬೈ: ಬಾಬಾ ಸಿದ್ದಿಕಿ (Baba Siddique) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮುಂಬೈ (Mumbai) ಪೊಲೀಸರು (Police) ಸ್ಕ್ರ್ಯಾಪ್ ಡೀಲರ್ ನನ್ನು ಬಂಧಿಸಿದ್ದಾರೆ.
ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಬಂಧಿತ ಆರೋಪಿಯನ್ನು ರಾಜಸ್ಥಾನದ ಉದಯಪುರ ಮೂಲದ ಭಗವತ್ ಓಂ ಸಿಂಗ್ (32) ಎಂದು ಗುರುತಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅ.26 ರವರೆಗೆ ಆತನನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಐವರನ್ನು ಪಿಸ್ತೂಲ್ ಒದಗಿಸಿದ ಕಾರಣಕ್ಕಾಗಿ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಗುರ್ಮೈಲ್ ಬಲ್ಜಿತ್ ಸಿಂಗ್ (23) ಧರ್ಮರಾಜ್ ಕಶ್ಯಪ್ (19) ಹರೀಶ್ಕುಮಾರ್ ಬಾಲಕ್ರಮ್ ನಿಸಾದ್ (23) ಮತ್ತು ಪ್ರವೀಣ್ ಲೋಂಕರ್ (28) ಎಂಬಾತನನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ಶಿವಕುಮಾರ್ ಗೌತಮ್ಗಾಗಿ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ.
ಬಾಂದ್ರಾದಲ್ಲಿನ ಪುತ್ರ, ಶಾಸಕ ಜೀಶನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಸಿದ್ದಿಕಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಆರೋಪಿಗಳಾಗಿರುವ ಮೂವರು ಶೂಟರ್ ಗಳು ಮುಂಬೈನ ಕುರ್ಲಾ ಪ್ರದೇಶದಲ್ಲಿ ಬಾಡಿಗೆಗೆ ವಾಸಿಸುತ್ತಿದ್ದರು ಎನ್ನಲಾಗಿದೆ.








