ರಾಯಚೂರು: ಸಾರಿಗೆ ಬಸ್ (Bus) ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ (Pedestrian) ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ತಾಲೂಕಿನ (Raichur) ತುಂಗಭದ್ರಾ ಗ್ರಾಮದ ಹತ್ತಿರ ನಡೆದಿದೆ. ಆಂಧ್ರ ಪ್ರದೇಶದ ಮಾಧವರಂನ ವೀರೇಶ್ (34) ಸಾವನ್ನಪ್ಪಿರುವ ದುರ್ದೈವಿ ಎಂದು ಗುರುತಿಸಲಾಗಿದೆ.
ವೀರೇಶ್ ಗಿಲ್ಲೇಸುಗೂರಿನಿಂದ ಆಂಧ್ರಪ್ರದೇಶದ ಮಾಧವರಂ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ರಾಯಚೂರಿನಿಂದ ಮಂತ್ರಾಲಯಕ್ಕೆ ಹೊರಟಿದ್ದ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ವೀರೇಶ್ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ಅಪಘಾತದ ನಂತರ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಕುರಿತು ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.