ಶ್ರೀನಗರ: 6 ಜನ ಕಾರ್ಮಿಕರು ಸೇರಿದಂತೆ ಓರ್ವ ವೈದ್ಯನ ಮೇಲೆ ಭಾನುವಾರ ನಡೆದ ಭಯೋತ್ಪಾದಕ ದಾಳಿಯ ಜವಾಬ್ದಾರಿಯನ್ನು ಪಾಕ್ (Pakistan) ನ ಭಯೋತ್ಪಾದಕ ಸಂಘಟನೆ ರೆಸಿಸ್ಟೆನ್ಸ್ ಫ್ರಂಟ್ (TRF) ವಹಿಸಿಕೊಂಡಿದೆ ಎಂದು ಸೇನಾ ಅಧಿಕೃತ ಮೂಲಗಳು ಹೇಳಿವೆ.
ಟಿಆರ್ಎಫ್ ಮುಖ್ಯಸ್ಥ ಶೇಖ್ ಸಜ್ಜದ್ ಗುಲ್ ಈ ದಾಳಿಯ ಮಾಸ್ಟರ್ ಮೈಂಡ್ ಎನ್ನಲಾಗಿದೆ. ಗುಂಪಿನ ಸ್ಥಳೀಯ ಘಟಕವು ಆತನ ಆದೇಶದಂತೆ ಕಾಶ್ಮೀರಿಗಳು ಮತ್ತು ಕಾಶ್ಮೀರೇತರರನ್ನು ಗುರಿಯಾಗಿಸಿ ಮೊದಲ ಬಾರಿಗೆ ದಾಳಿ ನಡೆಸಿವೆ ಎಂದು ತಿಳಿದು ಬಂದಿದೆ.
ಕೇಂದ್ರ ಗೃಹ ಸಚಿವಾಲಯದ ಮೂಲಗಳ ಪ್ರಕಾರ, ಭಯೋತ್ಪಾದನಾ ನಿಗ್ರಹ ಘಟಕದ ನಾಲ್ವರು ಸದಸ್ಯರ ತಂಡ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮಧ್ಯಾಹ್ನ ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ ಎಂದು ವರದಿಗಳು ಹೇಳಿವೆ.
ದಾಳಿಗೊಳಗಾದ ಕಾರ್ಮಿಕರು ಝಡ್ ಮೋರ್ಹ್ ಸುರಂಗದಲ್ಲಿ ಕೆಲಸ ಮಾಡುವ ತಂಡದ ಭಾಗವಾಗಿದ್ದರು. ಈ ಘಟನೆಯನ್ನು ಇಡೀ ರಾಷ್ಟ್ರ ಖಂಡಿಸಿದೆ.