ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರೆದಿದೆ. ಬುಧವಾರವೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ, ಬುಧವಾರ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಹೀಗಾಗಿ ಬುಧವಾರ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಆದರೆ, ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ, ಇಂಜಿನಿಯರ್ ಗಳಿಗೆ ರಜೆ ಇರುವುದಿಲ್ಲ. ಎಂದಿನಂತೆ ತರಗತಿಗಳು ನಡೆಯುತ್ತವೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.








