ಬೆಂಗಳೂರು: ಮಳೆಯಿಂದಾಗಿ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳೇ ನಡೆದಿದ್ದು, ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.
ಮಂಗಳವಾರ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು, ಈಗ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆ ಕಂಡಿದೆ. ನಿರ್ಮಾಣ ಹಂತದ ಕಟ್ಟಡ ಮಳೆಯಿಂದಾಗಿ ಕುಸಿದ ಪರಿಣಾಮ ಸಾವಿನ ಸಂಖ್ಯೆ 5ಕ್ಕೆ ಏರಿಕೆ ಕಂಡಿದೆ. ಅವಶೇಷಗಳಡಿ ಸಿಲುಕಿದವರ ಪತ್ತೆ ಕಾರ್ಯ ಇನ್ನೂ ನಡೆಯುತ್ತಿದೆ. ಮಧ್ಯರಾತ್ರಿ ಮೂವರ ಮೃತದೇಹಗಳು ಪತ್ತೆಯಾಗಿದ್ದು, ಇನ್ನು ಕೆಲವರು ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ.
ಈ ಕಟ್ಟಡ ಕಾಮಗಾರಿ ವೇಳೆ 16 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು ಸ್ಥಳಕ್ಕೆ ರಕ್ಷಣಾ ಕಾರ್ಯಾಚರಣೆ ತಂಡ ಭೇಟಿ ನೀಡಿ ಅವಶೇಷಗಳನ್ನು ತೆಗೆಯುವ ಕೆಲಸ ನಡೆಸುತ್ತಿದ್ದಾರೆ. ಘಟನೆಯಲ್ಲಿ 6 ಜನ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.








