ಲಕ್ನೋ: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 12.5 ಕೆಜಿ ಚಿನ್ನವನ್ನು (Gold) ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಈ ಘಟನೆ ಉತ್ತರ ಪ್ರದೇಶದ (Uttar Pradesh) ಮಥುರಾದಲ್ಲಿ ಈ ಘಟನೆ ನಡೆದಿದೆ. ಮಥುರಾ ಪೊಲೀಸರು ಯಮುನಾ ಎಕ್ಸ್ಪ್ರೆಸ್ ವೇಯಲ್ಲಿ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 12.5 ಕೆಜಿ ಚಿನ್ನ ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಾಂಟ್ ಟೋಲ್‌ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಕಾರಿನಿಂದ ಸುಮಾರು 12.5 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ದೆಹಲಿಯಿಂದ ಡಿಯೋರಿಯಾ ಕಡೆಗೆ ಚಿನ್ನವನ್ನು ಸಾಗಿಸುತ್ತಿದ್ದರು. ಆದರೆ, ಈ ಕುರಿತು ದಾಖಲೆಗಳು ಇರಲಿಲ್ಲ. ಆದ್ದರಿಂದ ಚಿನ್ನವನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಓರ್ವ ಉತ್ತರ ಪ್ರದೇಶದವನಾಗಿದ್ದು, ಇನ್ನೊಬ್ಬ ಬಿಹಾರ ಮೂಲದವನು ಎನ್ನಲಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.







