ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣಾ ಕಾವು ಜೋರಾಗಿದೆ. ಈಗಾಗಲೇ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ (Congress) ಅಭ್ಯರ್ಥಿಗಳನ್ನು ಘೋಷಿಸಿದ್ದು, ಮತ್ತೊಂದು ಕ್ಷೇತ್ರದ ಆಯ್ಕೆ ಕಗ್ಗಂಟಾಗಿದೆ.
ಚನ್ನಪಟ್ಟಣಕ್ಕೆ (Channapatna Bypoll) ಸಿ.ಪಿ.ಯೋಗೇಶ್ವರ್ (C.P.Yogeshwar) ಹಾಗೂ ಸಂಡೂರಿಗೆ ಈ.ಅನ್ನಪೂರ್ಣ ಅವರನ್ನು ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಿದೆ. ಶಿಗ್ಗಾಂವಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸದೇ ಬಾಕಿ ಉಳಿಸಿಕೊಂಡಿದೆ.
ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಟಿಕೆಟ್ಗಾಗಿ ಯತ್ನಿಸಿದ್ದ ಸಿ.ಪಿ. ಯೋಗೇಶ್ವರ್ ಅವರಿಗೆ ನಿರಾಸೆಯಾಗುತ್ತಿದ್ದಂತೆ ಅವರು ಮರಳಿ ಕಾಂಗ್ರೆಸ್ ಪಕ್ಷ ಸೇರಿದರು. ಹೀಗಾಗಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.
ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಿಪಿವೈ ಆಶೀರ್ವಾದ ಪಡೆದುಕೊಂಡರು. ನತರ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷ ಸೇರಿದರು. ಸಿಪಿವೈಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪಕ್ಷದ ಶಾಲು ಹೊದಿಸಿ ಆಹ್ವಾನಿಸಿದರು.








