ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಈ ಮಧ್ಯೆ ಸರಣಿ ಅಪಘಾತವೊಂದು ಸಂಭವಿಸಿದೆ.
ನಗರದ ಯಲಹಂಕಕ್ಕೆ ತೆರಳುವ ಮುಖ್ಯರಸ್ತೆಯಲ್ಲಿ 7 ಕಾರುಗಳು ಡಿಕ್ಕಿ ಹೊಡೆದಿವೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸರಣಿ ಅಪಘಾತ ಹಿನ್ನೆಲೆಯಲ್ಲಿ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ಫ್ಲೈ ಓವರ್ ಬಳಿ ವಾಹನಗಳು ಸಾಲುಗಟ್ಟಿ ನಿಂತಿವೆ. ನಿಧಾನಗತಿಯಲ್ಲಿ ವಾಹನಗಳು ಸಂಚರಿಸುತ್ತಿವೆ.
ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಜನರು ಸಂಕಷ್ಟದಲ್ಲೇ ಕಾಲ ಕಳೆಯಬೇಕಿದೆ.








