ಹಾವೇರಿ: ಶಿಗ್ಗಾಂವಿ ಉಪಚುನಾವಣೆಗೆ (Shiggaon Bypoll) ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗಿದ್ದು, ಈ ಬಾರಿಯೂ ಅಲ್ಪಸಂಖ್ಯಾತರಿಗೆ ಮಣೆ ಹಾಕಲಾಗಿದೆ.
ಯಾಸಿರ್ ಅಹಮದ್ ಖಾನ್ ಪಠಾಣ್ (Yasir Ahmed Khan Pathan) ಕಾಂಗ್ರೆಸ್ ಪಡೆದಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಕಳೆದ ನಾಲ್ಕು ಚುನಾವಣೆಗಳಿಂದಲೂ ಟಿಕೆಟ್ ಪಡೆಯುತ್ತಿದ್ದು, ನಾಲ್ಕೂ ಬಾರಿ ಸೋಲು ಕಂಡಿದೆ. ಹೀಗಾಗಿ ಈ ಬಾರಿ ಲಿಂಗಾಯತ ಸಮುದಾಯದ ಅಭ್ಯರ್ಥಿ ಟಿಕೆಟ್ ನೀಡಬೇಕೆಂಬ ಒತ್ತಾಯ ಕೇಳಿ ಬಂದಿತ್ತು. ಆದರೆ, ಮುಸ್ಲಿಂ ನಾಯಕರು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಮುಸ್ಲಿಂ ವ್ಯಕ್ತಿಗೆ ಟಿಕೆಟ್ ನೀಡಲಾಗಿದೆ.
ಕ್ಷೇತ್ರದಲ್ಲಿ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಜನರು ಕಾಂಗ್ರೆಸ್ ಪರವಾಗಿ ನಿಂತಿದ್ದರು. ಹೀಗಾಗಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಕೊಡಬೇಕು ಎಂಬುದು ಜಮೀರ್ ಅವರ ಆಗ್ರಹವಾಗಿತ್ತು.
ಬಸವರಾಜ ಬೊಮ್ಮಾಯಿ ಅವರು ಲೋಕಸಭೆಯಲ್ಲಿ ಸ್ಪರ್ಧಿಸಿ ಗೆದ್ದ ಹಿನ್ನೆಲೆಯಲ್ಲಿ ತೆರವಾಗಿದ್ದ ಶಿಗ್ಗಾಂವಿ ಎಂಎಲ್‌ಎ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಕಣದಲ್ಲಿದ್ದಾರೆ. ಪುತ್ರನನ್ನು ಗೆಲ್ಲಿಸಿಕೊಳ್ಳಲು ಬಸವರಾಜ ಬೊಮ್ಮಾಯಿ ಅವರು ಕಸರತ್ತು ನಡೆಸಿದ್ದಾರೆ.








