ನವದೆಹಲಿ: ಶಕ್ತಿ ಯೋಜನೆ ಪರಿಷ್ಕರಣೆ ವಿವಾದ ಹೆಚ್ಚಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಭರವಸೆಗಳನ್ನು ಈಡೇರಿಸುವುದು ಸುಲಭ. ಆದರೆ, ಅವುಗಳನ್ನು ಸಮರ್ಪಕವಾಗಿ ಜಾರಿಗೊಳಿಸುವುದು ತುಂಬಾ ಕಷ್ಟ. ಶಕ್ತಿ ಯೋಜನೆ ಪರಿಷ್ಕರಣೆ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಗ್ಯಾರಂಟಿ ಘೋಷಿಸಿಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದರು. ಈ ಸಂದರ್ಭದಲ್ಲೇ ಪ್ರಧಾನಿ ಮೋದಿ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.
ಅವಾಸ್ತವಿಕ ಭರವಸೆಗಳನ್ನು ನೀಡುವುದು ಸುಲಭ. ಆದರೆ, ಅವುಗಳನ್ನು ಸಮರ್ಪಕವಾಗಿ ಜಾರಿಗೊಳಿಸುವುದು ಕಠಿಣ. ಇದು ಅಸಾಧ್ಯ, ಕಠಿಣ ಮಾರ್ಗ ಎಂದು ಕಾಂಗ್ರೆಸ್ ಅರಿತುಕೊಂಡಿದೆ. ಜನರಿಗೆ ಭರವಸೆ ಮಾತ್ರ ನೀಡುತ್ತಾರೆ. ಅದರೆ ಅದನ್ನು ಎಂದಿಗೂ ಪೂರೈಸಲು ಸಾಧ್ಯವಿಲ್ಲ ಎಂದು ಅವರಿಗೆ ತಿಳಿದಿದೆ. ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಅವರು ಜನರ ಮುಂದೆ ಕೆಟ್ಟದಾಗಿ ನಿಂತಿದ್ದಾರೆ. ಅಲ್ಲಿ ಜನರ ಭರವಸೆ ಈಡೇರಿಸಿಲ್ಲ. ಈ ರಾಜ್ಯಗಳ ಜನರಿಗೆ ಕಾಂಗ್ರೆಸ್ ಮಾಡಿದ ಭೀಕರ ಮೋಸ ಎಂದು ಗುಡುಗಿದ್ದಾರೆ.
ಕಾಂಗ್ರೆಸ್ ಒಳರಾಜಕೀಯದಲ್ಲಿ ನಿರತವಾಗಿದೆ. ಅಭಿವೃದ್ಧಿಯ ಬಗ್ಗೆ ಕಾಳಜಿ ವಹಿಸುವ ಬದಲು ಲೂಟಿ ಮಾಡುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಸರ್ಕಾರಿ ನೌಕರರಿಗೆ ಸರಿಯಾದ ಸಮಯಕ್ಕೆ ಸಂಬಳ ಸಿಗುತ್ತಿಲ್ಲ. ತೆಲಂಗಾಣದಲ್ಲಿ ರೈತರಿಗೆ ಭರವಸೆ ನೀಡಿದ ಸಾಲ ಮನ್ನಾಕ್ಕಾಗಿ ಕಾಯುತ್ತಿದ್ದಾರೆ. ಈ ಹಿಂದೆ ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಅವರು ಕೆಲವು ಭರವಸೆ ನೀಡಿದ್ದರು. ಅದನ್ನು ಐದು ವರ್ಷಗಳವರೆಗೆ ಜಾರಿ ಮಾಡಲಿಲ್ಲ ಎಂದು ಆರೋಪಿಸಿದ್ದಾರೆ.