ಬೆಂಗಳೂರು: ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್ (Darshan) ಜಾಮೀನು ಪಡೆದು ಹೊರ ಬಂದಿದ್ದಾರೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.
ದರ್ಶನ್ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ. ನವೀನ್ ಅಪ್ಪಾಜಿ ಗೌಡ ಮಾತನಾಡಿ, ಮಧ್ಯಾಹ್ನ 3:30 ಕ್ಕೆ ದರ್ಶನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ದರ್ಶನ್ ಕಾಲಲ್ಲಿ ವೀಕ್ನೆಸ್ ಇದೆ. ಎಡಗಡೆಯ ಕಾಲು ನೋವಿದೆ. ಎಂಆರ್ಐ, ಸ್ಕ್ಯಾನಿಂಗ್, ಎಕ್ಸ್ ರೇ ಮಾಡಬೇಕಾಗುತ್ತದೆ. ಎಡಗಡೆಯ ಕಾಲು ತುಂಬಾ ನೋವಿದೆ. ಬೆನ್ನುನೋವಿಗೆ ಸಂಬಂಧಿಸದಂತೆ ಪರೀಕ್ಷೆ ಮಾಡಬೇಕಾಗುತ್ತದೆ. ಹೀಗಾಗಿ 48 ಗಂಟೆಗಳಲ್ಲಿ ನಮಗೆ ಎಲ್ಲ ರೀತಿಯ ರಿಪೋರ್ಟ್ ಸಿಗುತ್ತದೆ. ತಪಾಸಣೆಗೆ 24 ಗಂಟೆಗಳ ಕಾಲಬೇಕು ಎಂದು ತಿಳಿಸಿದರು.
ಎಡಗಾಲು ಸ್ಪರ್ಶತೆ ಸ್ವಲ್ಪ ಕಡಿಮೆ ಆಗಿದೆ. ಎಕ್ಸಾಮಿನೇಷನ್ ಮುಗಿದ ನಂತರ ಅಪರೇಷನ್ ಅಥವಾ ಫಿಸಿಯೋನಾ? ಅಥವಾ ಬೇರೆ ರೀತಿಯ ಚಿಕಿತ್ಸೆನಾ ಎಂಬುವುದು ಗೊತ್ತಾಗಲಿದೆ. ನೋವು ನಿವಾರಕ ನೀಡಲಾಗಿದೆ. ಎಕ್ಸಾಮಿನೇಷನ್ ರಿಪೋರ್ಟ್ ಬಳಿಕ ಮುಂದಿನ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.
ಬೆನ್ನುನೋವು, ಎಡಗಾಲು ನೋವು ಸಮಸ್ಯೆ ಹಾಗೂ ಎಡಗಾಲು ಸ್ಪರ್ಶತೆ ಕಡಿಮೆ ಇರೋದು ತಪಾಸಣೆಯಲ್ಲಿ ಬೆಳಕಿಗೆ ಬಂದಿದೆ. ಎಡಗಾಲು ನೋವಿಗೆ ವೈದ್ಯರು ಚಿಕಿತ್ಸೆ ನೀಡಲಿದ್ದಾರೆ.