ವಿಜಯಪುರ: ಯುವಕನ ಶವವೊಂದು ಎಪಿಎಂಸಿ ಪಕ್ಕದಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಬಸವನ ಬಾಗೇವಾಡಿ (Basavana Bagewadi) ಪಟ್ಟಣದ ಎಪಿಎಂಸಿ ಹೊರಭಾಗದಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಬಸವನ ಬಾಗೇವಾಡಿ ನಿವಾಸಿ ಸುನೀಲ ಭಜಂತ್ರಿ (23) ಎಂದು ಗುರುತಿಸಲಾಗಿದೆ. ಸಾವನ್ನಪ್ಪಿರುವ ಯುವಕ ಹಾಗೂ ಇನ್ನಿತರರು ಸೇರಿ ಭಾನುವಾರ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ಆನಂತರ ಯುವಕನ ಕುತ್ತಿಗೆಗೆ ಹಗ್ಗ ಹಾಕಿ ಕುತ್ತಿಗೆಯನ್ನು ತುಳಿದು ಕೊಲೆ ಮಾಡಿದ್ದಾರೆ. ಕೊಲೆಗೂ ಮುನ್ನ ಎಣ್ಣೆ ಪಾರ್ಟಿ ಮಾಡುವಾಗ ವಿಡಿಯೋ ಮಾಡಿದ್ದಾರೆ ಎನ್ನಲಾಗಿದೆ. ಈ ವಿಡಿಯೋ ಈಗ ವೈರಲ್ ಆಗಿದೆ.
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಯುವಕನನ್ನು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.