ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ನಡೆದಿದ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ.
ಮಾಜಿ ಸಿಎಂ ಯಡಿಯೂರಪ್ಪ (BS Yediyurappa), ಮಾಜಿ ಸಚಿವ ಶ್ರೀರಾಮುಲುಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಅಕ್ರಮ (Covid Scam) ಆರೋಪ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸಲು ಸಿಎಂ ನೇತೃತ್ವದ ಸಂಪುಟ ಸಭೆ ನಿರ್ಧರಿಸಿದೆ. ಇನ್ನೂ 2-3 ದಿನಗಳಲ್ಲಿ ಐಜಿ ಮಟ್ಟದ ಅಧಿಕಾರಿ ನೇತೃತ್ವದ ಎಸ್‌ಐಟಿ ರಚನೆ ಆಗಲಿದ್ದು, ಬಿಎಸ್‌ವೈ ವಿರುದ್ಧ ಎಫ್‌ಐಆರ್ (FIR) ದಾಖಲಾಗಲಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ (HK Patil) ಹೇಳಿದ್ದಾರೆ.
ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಕ್ಯಾಬಿನೆಟ್ ಸಚಿವರಿಂದ ಆಗ್ರಹ ಕೇಳಿಬಂದಿದೆ ಎನ್ನಲಾಗಿದೆ.








