ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ (Department of Excise) ಮಿತಿ ಮೀರಿ ಲಂಚ ಕೇಳಲಾಗುತ್ತಿದೆ ಎಂದು ಆಗ್ರಹಿಸಿ ಮದ್ಯ ಮಾರಾಟಗಾರರ ಒಕ್ಕೂಟ (Karnataka Wine Merchants’ Association) ನ.20ರಂದು ಮದ್ಯ ಬಂದ್ ಗೆ ಕರೆ ನೀಡಿದೆ.
ಮಾಜಿ ಸಚಿವ ಗೋಪಾಲಯ್ಯ, ಮಾಜಿ ಸಚಿವ ನಾಗೇಶ್ ಅಬಕಾರಿ ಸಚಿವರಾಗಿದ್ದಾಗಲೂ ಲಂಚ ಇತ್ತು. ಈಗ ಮಿತಿ ಮೀರಿದೆ ಎಂದು ಮದ್ಯ ಮಾರಾಟಗಾರರು ಆರೋಪಿಸಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಕೋಟಿ ಕೋಟಿ ಲಂಚ ಸ್ವೀಕಾರ ಎಂದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಬಿಜೆಪಿ ಮತ್ತು ಕೇಂದ್ರ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಮುಗಿ ಬೀಳುತ್ತಿದ್ದಾರೆ. ಮದ್ಯ ಮಾರಾಟಗಾರರ ಸಂಘ ಭ್ರಷ್ಟಾಚಾರ ಖಂಡಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವೆಂಬರ್ 20ರಂದು ಮದ್ಯ ಮಾರಾಟ ಬಂದ್ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.








