ಬೆಂಗಳೂರು: ಬಿ.ಎಲ್.ಸಂತೋಷ್ ಅವರೇ, ನೀವು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ನೀಡಿರುವ ಶಹಭಾಸ್ ಗಿರಿ ಮನಸ್ಸಿನಿಂದ ಬಂದದ್ದೋ, ನಾಲಿಗೆಯಿಂದಲೋ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಬಿಜೆಪಿಯ ಜನಸಂವಾದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ್ದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್, ಕೊರೊನಾ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಶ್ಲಾಘಿಸಿದ್ದರು.
ಸಂತೊಷ್ ಮಾತಿಗೆ ಟ್ವೀಟಾಸ್ತ್ರ ನೀಡಿರುವ ಸಿದ್ದರಾಮಯ್ಯ, ನೀವು ಆಗಾಗ ಕರ್ನಾಟಕಕ್ಕೆ ಬಂದು ಯಡಿಯೂರಪ್ಪ ವಿರುದ್ಧ ಸಹದ್ಯೋಗಿಗಳನ್ನು ಎತ್ತಿಕಟ್ಟುವುದನ್ನು ನಿಲ್ಲಿಸಿದರೆ ಅವರು ನಿಮಗೆ ಶಹಭಾಸ್‌ಗಿರಿ ಕೊಡಬಹುದೇನೋ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್ ನೀಡಿದ್ದ ಒಂದು ಕೋಟಿ ರೂಪಾಯಿ ಪರಿಹಾರದ ಲೆಕ್ಕವನ್ನು ಬಿ.ಎಲ್.ಸಂತೋಷ್ ಕೇಳಿದ್ದಾರೆ. ಅದನ್ನು ಕೊಡೋಣ. ಮೊದಲು ಪ್ರತಿಯೊಬ್ಬ ಭಾರತೀಯನ ಖಾತೆಗೆ ಪ್ರಧಾನಿ ನರೇಂದ್ರ ಮೋದಿ ಜಮೆ ಮಾಡಿರುವ ೧೫ ಲಕ್ಷ ರೂಪಾಯಿಯ ಲೆಕ್ಕ ಕೊಡಿ. ಜತೆಗೆ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿರುವ ‘ಪಿಎಂ ಕೇರ್ಸ್’ ನಿಧಿಯ ಲೆಕ್ಕಕೊಡಿ ಎಂದು ಸವಾಲು ಹಾಕಿದ್ದಾರೆ.









