ಮುಂಬಯಿ: ಭಾರತೀಯ ಕ್ರಿಕೆಟ್ (Team India) ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಅವರ ಪತ್ನಿ ರಿತಿಕಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಹೀಗಾಗಿ ರೋಹಿತ್ ದಂಪತಿ ಮನೆಗೆ ಎರಡನೇ ಅತಿಥಿಯ ಆಗಮನವಾಗಿದೆ.
ರೋಹಿತ್ ಶರ್ಮಾ ಅವರಿಗೆ ಈಗಾಗಲೇ 6 ವರ್ಷದ ಮಗಳಿದ್ದಾಳೆ. ಪತ್ನಿ ಗರ್ಭಿಣಿಯಾಗಿರುವ ಹಿನ್ನೆಲೆಯಲ್ಲಿ ಪರ್ತ್ ಟೆಸ್ಟ್ ನಿಂದ ದೂರ ಉಳಿದಿದ್ದರು. ಆದರೆ, ಟೆಸ್ಟ್ ಆರಂಭಕ್ಕೂ ಮುನ್ನವೇ ಪತ್ನಿಯಿಂದ ಗುಡ್ ನ್ಯೂಸ್ ಸಿಕ್ಕಿದೆ. ಪತ್ನಿಗೆ ಗಂಡು ಮಗು ಜನಿಸಿದ್ದು, ಟೀಂ ಇಂಡಿಯಾ ನಾಯಕ ಶೀಘ್ರದಲ್ಲೇ ಆಸ್ಟ್ರೇಲಿಯಾಕ್ಕೆ ತೆರಳಬಹುದು ಎಂದು ಹೇಳಲಾಗಿದೆ.
ಬಾರ್ಡರ್-ಗವಾಸ್ಕರ್ ಟ್ರೋಫಿಗೆ ರೋಹಿತ್ ಆಸ್ಟ್ರೇಲಿಯಾಕ್ಕೆ ಬರಲು ಸಾಧ್ಯವಾಗದಿದ್ದರೆ ಜಸ್ಪ್ರೀತ್ ಬುಮ್ರಾ ತಂಡ ಮುನ್ನಡೆಸಬಹುದು. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ನಲ್ಲಿ ಸ್ವದೇಶದಲ್ಲೇ ಟೀಂ ಇಂಡಿಯಾ ವೈಟ್ವಾಶ್ ಅನುಭವಿಸಿತು. WTC ಫೈನಲ್ಗೆ ಅರ್ಹತೆ ಪಡೆಯಲು ಭಾರತ ತಂಡ, ಆಸ್ಟ್ರೇಲಿಯಾದಲ್ಲಿ ನಾಲ್ಕು ಅಥವಾ ಹೆಚ್ಚಿನ ಪಂದ್ಯಗಳನ್ನು ಗೆಲ್ಲುವ ಅಗತ್ಯವಿದೆ.








