ಬೆಂಗಳೂರು: ಬಿಜೆಪಿ (BJP) ತನ್ನ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ವಕ್ಫ್ (Waqf) ಅಭಿಯಾನ ಆರಂಭಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಏನೂ ಕೆಲಸ ಇಲ್ಲ. ಹೀಗಾಗಿ ಅವರು ಹೋರಾಟಕ್ಕೆ ಮುಂದಾಗಿದ್ದಾರೆ. ಜನರ ಸಮಸ್ಯೆ ಬಗೆಹರಿಸಲು ಅವರಿಂದ ಆಗಲಿಲ್ಲ. ಈಗ ನಾಟಕ ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ.
ಕೇಂದ್ರ ಸರ್ಕಾರ ವಕ್ಫ್ ಆಸ್ತಿಗೆ ಜಿಯೋ ಮ್ಯಾಪಿಂಗ್‌ಗೆ ಹಣ ಕೊಟ್ಟಿರೋದು ಸುಳ್ಳಾ? ವಕ್ಫ್ ಆಸ್ತಿ ಉಳಿಸುತ್ತೇವೆ ಅಂತ ಹೇಳಿರೋರು ಸುಳ್ಳಾ? ಬಿಜೆಪಿ ಅವರು ಪ್ರಣಾಳಿಕೆಯಲ್ಲಿ ವಕ್ಫ್ ಆಸ್ತಿ ಉಳಿಸುತ್ತೇವೆ ಎಂದು ಹೇಳಿರೋದು ಸುಳ್ಳಾ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಅವಧಿಯಲ್ಲಿ ಅವರು ವಕ್ಫ್ ಬೋರ್ಡ್ ಮುಚ್ಚಿದ್ರಾ? ಅವರು ಎಷ್ಟು ದೇವಾಲಯ ರಕ್ಷಣೆ ಮಾಡಿದ್ದಾರೆ ಹೇಳಲಿ. ನಾನು ಬೇಕಾದರೆ ಅಂಕಿ ಅಂಶಗಳನ್ನು ಕೊಡುತ್ತೇನೆ ಎಂದು ಸವಾಲು ಹಾಕಿದ್ದಾರೆ.








