ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ ಗಣಿಗ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಅಲ್ಲ, 100 ಕೋಟಿ ರೂಪಾಯಿಯ ಆಫರ್ ಬಿಜೆಪಿ ಕಡೆಯಿಂದ ಬಂದಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ಬೆಂಬಲಿಸಿದ ರವಿಕುಮಾರ್ ಗೌಡ ಗಣಿಗ, “ಶಾಸಕರ ಭೇಟಿಯ ಆಡಿಯೋ ಮತ್ತು ವೀಡಿಯೋ ರೆಕಾರ್ಡ್ ನಮ್ಮ ಬಳಿ ಇದೆ. ಈ ರೆಕಾರ್ಡ್ಗಳನ್ನು ಸಮಯ ಬಂದಾಗ ಬಿಡುಗಡೆ ಮಾಡುತ್ತೇವೆ” ಎಂದು ಹೇಳಿದ್ದಾರೆ.
ಈ ಹಿಂದೆ, ಕಳೆದ ಆಗಸ್ಟ್ ತಿಂಗಳಲ್ಲಿಯೂ ರವಿಕುಮಾರ್ ಈ ರೀತಿಯ ಆರೋಪಗಳನ್ನು ಮಾಡಿದ್ದರು. ಈ ಆರೋಪಗಳು ಕರ್ನಾಟಕದ ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ..