ಬೆಂಗಳೂರು: ಮಹಾರಾಷ್ಟ್ರ ವಿರುದ್ಧ ಕಾನೂನು ಸಮರ ನಡೆಸಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕದಲ್ಲಿ (Karnataka) ಗ್ಯಾರಂಟಿಗಳು ಸರಿಯಾಗಿ ಕೊಡ್ತಿಲ್ಲ ಎಂದು ಮಹಾರಾಷ್ಟ್ರ ಚುನಾವಣೆಯಲ್ಲಿ ಪ್ರಧಾನಿ ಮೋದಿ ಪ್ರಚಾರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುತ್ತಿದ್ದಾರೆ. ಹೀಗಾಗಿ ಅಲ್ಲಿನ ಸರ್ಕಾರ ಕೂಡ ಜನರ ದಾರಿ ತಪ್ಪಿಸುವ ಕಾರ್ಯ ಮಾಡುತ್ತಿದೆ. ಸುಳ್ಳು ಜಾಹೀರಾತನ್ನು ಅಲ್ಲಿನ ಬಿಜೆಪಿ ಸರ್ಕಾರ ನೀಡಿದೆ. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಮಾಡಲು ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದೇನೆ ಎಂದಿದ್ದಾರೆ.
ಮಹಾರಾಷ್ಟ್ರ (Maharashtra) ಸರ್ಕಾರದ ಸುಳ್ಳು ಜಾಹೀರಾತಿಗೆ ತಕ್ಕ ಉತ್ತರ ನೀಡಲಿದ್ದೇವೆ ಎಂದಿದ್ದಾರೆ.








