ಬೆಂಗಳೂರು: ರಾಜ್ಯದಲ್ಲಿ ರೇಷನ್ ಕಾರ್ಡ್ ವಿವಾದ ದೊಡ್ಡ ಮಟ್ಟದ ಸದ್ದು ಮಾಡತ್ತಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಅನರ್ಹರ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುತ್ತಿದೆ ಎಂದಿದ್ದಾರೆ. ಆದರೂ ವಿರೋಧ ಪಕ್ಷಗಳು ಆರೋಪಿಸುತ್ತಿದ್ದು, ಈ ಮಧ್ಯೆ ಅರ್ಹರ ಬಿಪಿಎಲ್, ಎಪಿಎಲ್ ಕಾರ್ಡ್ಗಳು ರದ್ದಾಗಿದ್ದರೆ, ಮರು ಅರ್ಜಿ ಸಲ್ಲಿಕೆಗೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದುಡ್ತೀವಿ ಎಂದು ಸಚಿವ ಕೆ.ಹೆಚ್. ಮುನಿಯಪ್ಪ (KH Muniyappa) ಹೇಳಿದ್ದಾರೆ.
ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಸಭೆ ನಡೆಯಿತು. ಸಚಿವ ರಾಜಣ್ಣ, ಪರಮೇಶ್ವರ್, ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಕೆ.ಹೆಚ್ ಮುನಿಯಪ್ಪ ಸೇರಿದಂತೆ ಹಲವು ಸಚಿವರು ಭಾಗವಹಿಸಿದ್ದರು. ಉನ್ನತ ಮಟ್ಟದ ಸಭೆಯಲ್ಲಿ ವಕ್ಫ್ ವಿವಾದ, ರೇಷನ್ ಕಾರ್ಡ್ (Ration Card) ವಿವಾದ, ಗ್ಯಾರಂಟಿ ಗದ್ದಲ, ಆಪರೇಷನ್ ಕಮಲ ಆರೋಪ-ಪ್ರತ್ಯಾರೋಪ, ಅಧಿವೇಶನ, ಉಪಚುನಾವಣೆ, ಸಚಿವರ ಹೇಳಿಕೆಗಳ ಕುರಿತು ಚರ್ಚಿಸಲಾಯಿತು.
ಎಪಿಎಲ್-ಬಿಪಿಎಲ್ ಕಾರ್ಡ್ಗೆ ಸಂಬಂಧಿಸಿದಂತೆ ಗೊಂದಲ ನಿವಾರಣೆ ಮಾಡುವಂತೆ ಸಚಿವ ಮುನಿಯಪ್ಪಗೆ ಸಿಎಂ ಸೂಚನೆ ನೀಡಿದರು. ಬಿಪಿಎಲ್ ಕಾರ್ಡ್ ರದ್ದಾಗಿದೆ ಅಂತ ವಿಪಕ್ಷಗಳು ವಿವಾದ ಮಾಡ್ತಿವೆ. ಇದಕ್ಕೆ ಅಂಕಿ-ಅಂಶಗಳ ಸಮೇತ ಉತ್ತರ ನೀಡುವಂತೆ ಸೂಚಿಸಿದರು.