ರಾಷ್ಟ್ರ ಪ್ರಶಸ್ತಿ ವಿಜೇತ ನಟ ರಿಷಬ್ ಶೆಟ್ಟಿ(Rishab Shetty) ನಟನೆಯ ‘ಕಾಂತಾರ ಚಾಪ್ಟರ್ 1’ರ (Kantara Chapter 1) ಟೈಟಲ್ ಟೀಸರ್ ಬಿಡುಗಡೆ ಆಗಿದೆ. ಸದ್ಯ ಸಿನಿಮಾದ ಮೊದಲ ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಮೆಚ್ಚುಗೆ ಪಡುತ್ತಿದ್ದಾರೆ.
ರಿಷಬ್ ಶೆಟ್ಟಿ ಉತ್ತಮ ನಟ ಎಂಬುವುದನ್ನು ಕಾಂತಾರದಿಂದ ಸಾಬೀತು ಮಾಡಿದ್ದಾರೆ. ಇದೀಗ ಕಾಂತಾರ ಚಾಪ್ಟರ್ 1ರ ಮೂಲಕ ರಿಷಬ್ ಗಮನ ಸೆಳೆಯುತ್ತಿದ್ದಾರೆ. ಚಿತ್ರದ ಟೀಸರ್ನಲ್ಲಿ ರಿಷಬ್ ಕಣ್ಣಲ್ಲಿ ಬೆಳಕಿದೆ ಜೊತೆ ರಕ್ತಸಿಕ್ತ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.
ಈಗಾಗಲೇ ಈ ಚಿತ್ರದ ಡೇಟ್ ನ್ನು ಕೂಡ ಹಂಬಾಳೆ ಫಿಲ್ಮ್ಸ್ ಅನೌನ್ಸ್ ಮಾಡಿದೆ. 2025ರ ಅಕ್ಟೋಬರ್ 2ರಂದು ಈ ಸಿನಿಮಾ ಬಿಡುಗಡೆಯಾಗಲಿದೆ. ಏಕಕಾಲಕ್ಕೆ ಕನ್ನಡ, ಹಿಂದಿ, ಇಂಗ್ಲಿಷ್ ಹಾಗೂ ತೆಲುಗು ಭಾಷೆಗಳಲ್ಲಿ ಸಿನಿಮಾ ತೆರೆಯ ಮೇಲೆ ಬರಲಿದೆ ಎಂದು ಈಗಾಗಲೇ ಹೊಂಬಾಳೆ ಸಂಸ್ಥೆ ಹೇಳಿದೆ.








