ಉಡುಪಿ: ನಕ್ಸಲ್ ನಾಯಕನ ಎನ್ ಕೌಂಟರ್ ಮಾಡಿರುವ ಘಟನೆ ರಾಜ್ಯದಲ್ಲಿ ನಡೆದಿದೆ.
ಪಶ್ಚಿಮ ಘಟ್ಟದ ತಪ್ಪಲಿನ ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ (Kabbinale Forest) ನಕ್ಸಲ್ ಕಾರ್ಯಕರ್ತ ವಿಕ್ರಂ ಗೌಡನನ್ನು (Vikram Gowda) ಎನ್‌ಕೌಂಟರ್ (Encounter) ಮಾಡಿ ಹತ್ಯೆ ಮಾಡಲಾಗಿದೆ.
ನಕ್ಸಲ್ ನಿಗ್ರಹ ದಳ (ANF) ಮತ್ತು ನಕ್ಸಲರ (Naxal) ಮಧ್ಯೆ ಗುಂಡಿನ ಕಾಳಗ ನಡೆದಿದೆ. ಈ ಸಂದರ್ಭದಲ್ಲಿ ಓರ್ವ ಹತನಾಗಿದ್ದು, ಮೂವರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ನಕ್ಸಲ್ ಹೆಜ್ಜೆ ಗುರುತು ಪತ್ತೆಯಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡದ ಅರಣ್ಯ ಭಾಗದಲ್ಲಿ ಎಎನ್‌ಎಫ್ ಕೂಂಬಿಂಗ್ ನಡೆಸುತ್ತಿದೆ. ಸೋಮವಾರ ರಾತ್ರಿ ಐದು ಜನರಿದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಎಎನ್‌ಎಫ್ ಮೇಲೆ ದಾಳಿ ನಡೆಸಿದ್ದಾರೆ. ದಾಳಿ-ಪ್ರತಿದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಉಳಿದವರು ಪರಾರಿಯಾಗಿದ್ದಾರೆ. ಅವರಿಗೆ ಶೋಧ ಕಾರ್ಯ ನಡೆಯುತ್ತಿದೆ.








