ಚಿತ್ರದುರ್ಗ: ಪತಿಯ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ತಾಯಿ ಹಾಗೂ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಳಲ್ಕೆರೆ (Holalkere) ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ ನಡೆದಿದೆ. ತಾಯಿ ಗೀತಾ (45), ಮಗಳು ಲಾವಣ್ಯ(17) ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಗಳು. ತಾಯಿ ಹಾಗೂ ಮಗಳು ಕಳೆದ ಒಂದು ವಾರದ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಾಯಿ, ಮಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಇತ್ತೀಚೆಗಷ್ಟೇ ಗೀತಾ ಅವರ ಪತಿ ಹೃದಯಾಘಾತಕ್ಕೆ ಬಲಿಯಾಗಿದ್ದರು. ಇದರಿಂದಾಗಿ ಪತ್ನಿ ಹಾಗೂ ಮಗಳು ತುಂಬಾ ನೊಂದು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಕುಟುಂಬ ನಿರ್ವಹಣೆ ಕೂಡ ಕಷ್ಟವಾಗಿತ್ತು. ಕೊನೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








