ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಹಾಗೂ ವಕ್ಫ್ ಬೋರ್ಡ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತು. ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.
ಸಂಸತ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ವಕ್ಫ್ ಬೋರ್ಡ್ ಎಂಬ ರಾಕ್ಷಸನನ್ನ ಸಂಹಾರ ಮಾಡ್ತಾರೆ. ವಕ್ಫ್ ಬೋರ್ಡ್ ಎಂಬುದು ತಿಮಿಂಗಲ, ಪಿಶಾಚಿ, ಕೊಳ್ಳಿ ದೆವ್ವ, ರಾಕ್ಷಸ ಇದ್ದ ಹಾಗೆ. ಈ ವಕ್ಫ್ ಬೋರ್ಡ್ ಎಂಬ ರಾಕ್ಷಸನನ್ನು ಪ್ರಧಾನಿ ಮೋದಿ ಸಂಹಾರ ಮಾಡ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದೂ, ಬೌದ್ಧರು, ಕ್ರೈಸ್ತರಿಗಿಲ್ಲದ ವಿಶೇಷ ಸ್ಥಾನಮಾನ ಇವರಿಗೆ ಯಾಕೆ? ಅಂಬೇಡ್ಕರ್ ಸಂವಿಧಾನ ಇವರಿಗೆ ಅನ್ವಯ ಆಗಲ್ವಾ? ಇದು ಕಾಂಗ್ರೆಸ್ ಮನೆಹಾಳು ಬುದ್ದಿ. ಹೀಗಾಗಿ ನಾವು ಸಹ ವಕ್ಫ್ ಬೋರ್ಡ್ ವಜಾ ಮಾಡಬೇಕು ಅಂತ ಹೋರಾಟ ಮಾಡುತ್ತೇವೆ ಎಂದಿದ್ದಾರೆ.
ಸಂಸದ ಡಾ.ಕೆ ಸುಧಾಕರ್ (Dr. K.Sudhakar) ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಲ್ಯಾಂಡ್ ಜಿಹಾದ್ ಘೋಷಣೆ ಮಾಡಿದೆ. ರೈತರ ಜಮೀನು ಉಳಿಸುವ ಸಲುವಾಗಿ ಬಿಜೆಪಿ ವತಿಯಿಂದ ಹೋರಾಟ ಮಾಡುತ್ತಿದ್ದೇವೆ. ನಾವು ರೈತರ ಭೂಮಿಯನ್ನು ಉಳಿಸಿಯೇ ಉಳಿಸುತ್ತೇವೆ ಎಂದಿದ್ದಾರೆ.








