ಬೆಂಗಳೂರು: ವಿದ್ಯಾರ್ಥಿಗಳ ಜೊತೆಗೆ ನಡೆದ ವಿಡಿಯೋ ಕಾನ್ಫರೆನ್ಸ್ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರಿಗೆ ಮುಜುಗರ ಉಂಟಾದ ಘಟನೆ ನಡೆದಿದೆ.
ವಿಧಾನಸೌಧದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ NEET, JEE, CET ಉಚಿತ ಕೋಚಿಂಗ್ ತರಬೇತಿಗೆ ಚಾಲನೆ ನೀಡುವ ಕಾರ್ಯಕ್ರಮ ನೆಡಸಲಾಗಿತ್ತು. ಈ ಸಂದರ್ಭದಲ್ಲಿ ಮಧು ಬಂಗಾರಪ್ಪ ಅವರು ವಿದ್ಯಾರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ (video conference) ಮೂಲಕ ಸಂವಾದ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಚಿವರಿಗೆ ಕನ್ನಡ (Kannada) ಬರಲ್ಲ ಎಂದು ನೇರವಾಗಿಯೇ ಹೇಳಿದ್ದಾನೆ.
ಈ ಮಾತನ್ನು ಕೇಳಿಸಿಕೊಂಡ ಮಧು ಬಂಗಾರಪ್ಪ, ಯಾರೋ ಅದು ಹೇಳಿದ್ದು, ಏನಂತ ಹೇಳಿದ್ದು? ನಾನೇನು ಉರ್ದು ಮಾತಾಡಿದ್ನಾ? ಕನ್ನಡದಲ್ಲೇ ಮಾತನಾಡಿದ್ದು ಎಂದು ಸಿಟ್ಟಾದ ಘಟನೆ ನಡೆದಿದೆ.
ಆಗ ಪಕ್ಕದಲ್ಲಿ ಕುಳಿತಿದ್ದ ಪದವಿ ಪೂರ್ವ ಕಾಲೇಜು ನಿರ್ದೇಶಕಿ ಸಿಂಧೂ ಬಿ ರೂಪೇಶ್ ಮತ್ತು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಅವರಲ್ಲಿ, ಯಾರು ನೋಡಿ ರೆಕಾರ್ಡ್ ಮಾಡಿ. ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.