ಬೆಂಗಳೂರು: ಪಿಜಿಗಳಲ್ಲಿ (PG) ಆಹಾರ ಸುರಕ್ಷತೆ ಕಾಪಾಡಿಕೊಳ್ಳುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ 127 ಪಿಜಿಗಳಿಗೆ ಆಹಾರ ಸುರಕ್ಷತಾ ಮತ್ತು ಗುಣಮಟ್ಟ (FSSAI) ಇಲಾಖೆ ದಾಳಿ ನಡೆಸಿ, ಪರಿಶೀಲನೆ ನಡೆಸಿದೆ. ಈ ವೇಳೆ ಹಲವು ಪಿಜಿಗಳಿಗೆ ನೋಟಿಸ್ ನೀಡಲಾಗಿದೆ.
ರಾಜ್ಯದ 305 ಪಿಜಿಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ 127 ಪಿಜಿಗಳಲ್ಲಿ ಆಹಾರ ಪದಾರ್ಥಗಳನ್ನು ಸಂಗ್ರಹ ಮಾಡಲಾಗಿದೆ. ಸಂಗ್ರಹಿಸಿದ ಆಹಾರ ಪದಾರ್ಥಗಳನ್ನು ಪರೀಕ್ಷಿಸಿದಾಗ ಸುರಕ್ಷತೆ ಕಾಪಾಡದೇ ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆ 127 ಪಿಜಿಗಳಿಗೆ ನೋಟಿಸ್ ನೀಡಲಾಗಿದೆ. ನಾಲ್ಕು ಪಿಜಿಗಳು ಸೇರಿದಂತೆ ಒಟ್ಟು 21 ಸಾವಿರ ರೂ. ದಂಡ ಸಂಗ್ರಹಿಸಲಾಗಿದೆ.