ವಿಜಯಪುರ: ವಕ್ಫ್ ನೀಡಿರುವ ನೋಟಿಸ್ ಹಿಂಪಡೆಯುವದಷ್ಟೇ ಅಲ್ಲ, ವಕ್ಫ್ ರದ್ದುಗೊಳಿಸಬೇಕೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ರದ್ದುಗೊಳಿಸದಿದ್ದರೆ ಅಧಿವೇಶನದ ಸಂದರ್ಭದಲ್ಲಿ ಹೋರಾಟ ಮಾಡುತ್ತೇವೆ ಎಂದು ವಿಜಯಪುರದಲ್ಲಿ (Vijayapura) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಗುಡುಗಿದ್ದಾರೆ.
ವಕ್ಫ್ (Waqf) ಕರಾಳ ಕಾನೂನನ್ನು ವಾಪಸ್ ಪಡೆಯಬೇಕು ಎಂದು ಪ್ರಧಾನಿಗಳಿಗೂ ಮನವಿ ಮಾಡಿದ್ದೇವೆ. ಮುಸ್ಲಿಂರಿಗೆ ವಕ್ಫ್ ಟ್ರಿಬ್ಯುನಲ್ ಒಪ್ಪುವುದಿಲ್ಲ. ದೇಶದಲ್ಲಿ ಇರಬೇಕಾದರೆ ನಮ್ಮ ದೇಶದ ಕಾನೂನು ಪಾಲಿಸಬೇಕು. ನ. 25 ರಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಹೋರಾಟ ಮಾಡಲಿದ್ದೇವೆ. ನೋಟಿಸ್ ನೀಡದೆ ಇಲ್ಲಿಯವರೆಗೆ ಸೇರ್ಪಡೆಯಾದ ವಕ್ಫ್ ಹೆಸರು ರದ್ದಾಗಬೇಕು. ಸದನದಲ್ಲಿ ಈ ಕುರಿತು ಚರ್ಚೆ ಮಾಡುತ್ತೇವೆ ಎಂದಿದ್ದಾರೆ.
ವಕ್ಫ್ ನವರಿಗೆ ಅವರದೇ ಕೋರ್ಟ್, ಅವರದೇ ನ್ಯಾಯಾಲಯ. ಕಳ್ಳರ ಬಳಿ ನ್ಯಾಯ ಬೇಡುವ ಹಾಗಾಗುತ್ತದೆ. ವಕ್ಫ್ ವಿರುದ್ಧ ನಿರಂತರ ಹೋರಾಟ ಮುಂದುವರೆಯಲಿದೆ ಎಂದು ಹೇಳಿದ್ದಾರೆ.