ಬೆಂಗಳೂರು: ಇಲ್ಲಿಯ ರಾಜಾಜಿನಗರ ರಾಜ್ ಕುಮಾರ್ ರಸ್ತೆಯ (Rajkumar Road) ಹತ್ತಿರ ಎಲೆಕ್ಟ್ರಿಕ್ ಬೈಕ್ ಶೋರೂಂಗೆ ಬೆಂಕಿ ಹೊತ್ತಿ, ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋರೂಂ ಮಾಲೀಕ ಹಾಗೂ ಮ್ಯಾನೇಜರ್ ನನ್ನು ರಾಜಾಜಿನಗರ (Rajaji Nagar) ಪೊಲೀಸರು ಬಂಧಿಸಿದ್ದಾರೆ
ಬಂಧಿತರನ್ನು ಮಾಲೀಕ ಪುನೀತ್ ಹಾಗೂ ಮ್ಯಾನೇಜರ್ ಯುವರಾಜ್ ಎಂದು ಗುರುತಿಸಲಾಗಿದೆ. ನ.19 ರಂದು ಈ ಘಟನೆ ನಡೆದಿತ್ತು. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಸಂಪೂರ್ಣ ಭಸ್ಮವಾಗಿತ್ತು. ಘಟನೆಯಲ್ಲಿ ಓರ್ವ ಯುವತಿ ಸಜೀವ ದಹನಗೊಂಡಿದ್ದು, ಮೂವರು ಗಾಯಗೊಂಡಿದ್ದರು. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ನಂತರ ಶೋ ರೂಂ ಮಾಲೀಕ ಪುನೀತ್ ಪರಾರಿಯಾಗಿದ್ದ. ಇದೀಗ ಮಾಲೀಕನನ್ನು ವಶಕ್ಕೆ ಪಡೆಯಲಾಗಿದ್ದು, ಆತನ ವಿರುದ್ಧ ಬಿಎನ್ಎಸ್ 106 ಅಡಿ ಪ್ರಕರಣ ದಾಖಲಿಸಲಾಗಿದೆ.