ಮಂಡ್ಯ: ಟೋಲ್ ನಲ್ಲಿ ದಂಡ ಕಟ್ಟದೆ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಬೆಂಗಳೂರು- ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bengaluru-Mysuru Expressway) ಈ ಘಟನೆ ನಡೆದಿದೆ. ಟೋಲ್ ಕಟ್ಟಿ ಎಂದಿದ್ದಕ್ಕೆ ಕಾಂಗ್ರೆಸ್ (Congress) ಮುಖಂಡ ಜಗಳ ಮಾಡಿ, ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.
ಕಾಂಗ್ರೆಸ್ ಪಕ್ಷದ ಸಮಿತಿ ಒಂದರ ಪದಾಧಿಕಾರಿ ಬೋರ್ಡ್ ಹಾಕಿದ ಕಾರು ಶ್ರೀರಂಗಪಟ್ಟಣ (Srirangapatna) ತಾಲೂಕಿನ ಗಣಂಗೂರು ಟೋಲ್‌ಗೆ ಬಂದಿತ್ತು. ಮೈಸೂರು ಕಡೆಗೆ ಹೊರಟಿದ್ದ ಕಾರು ಚಾಲಕ ಮತ್ತು ಅದರ ಒಳಗಡೆ ಇದ್ದ ಪ್ರಯಾಣಿಕರು ಟೋಲ್ ಕಟ್ಟಲು ನಿರಾಕರಿಸಿದ್ದಾರೆ. ಆಗ ಕಾರನ್ನು ಬಿಡುತ್ತಿಲ್ಲ ಎಂದು ಹಲ್ಲೆ ಮಾಡಿ, ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ.
ನಾನು ಕಾಂಗ್ರೆಸ್ ನಾಯಕ, ಟೋಲ್ ದುಡ್ಡು ಕಟ್ಟಲ್ಲ ಎಂದು ಕ್ಯಾತೆ ತೆಗೆದಿದ್ದಾನೆ. ಟೋಲ್ ದುಡ್ಡು ಕಟ್ಟಲೇಬೇಕೆಂದು ಸಿಬ್ಬಂದಿ ಪಟ್ಟು ಹಿಡಿದಿದ್ದಾರೆ. ಈ ವೇಳೆ ಜಗಳ ನಡೆದಿದೆ. ಆಗ ಮಹಿಳಾ ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿ ಜುಟ್ಟು ಹಿಡಿದು ಎಳೆದಾಡಿದ್ದಾಳೆ. ಸ್ಥಳಕ್ಕೆ ಪೊಲೀಸರು ಬಂದರೂ ಹಲ್ಲೆ ನಡೆಸಿದವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.








