ಭಾರತ ತನ್ನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 150 ರನ್‌ಗಳಿಗೆ ಆಲೌಟ್ ಆಗಿದ್ದು, ಭಾರತೀಯ ಬ್ಯಾಟ್ಸ್‌ಮನ್ ಗಳು ಮತ್ತೊಮ್ಮೆ ವಿಫಲರಾಗಿದ್ದಾರೆ.
ಪರ್ತ್‌ನ ಆಪ್ಟಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕಾರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೊದಲ ದಿನ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿದೆ.
ಮೊದಲು ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಜಸ್ಪ್ರೀತ್ ಬುಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರೂ, ಟೀಮ್ ಇಂಡಿಯಾದ ಟಾಪ್ ಆರ್ಡರ್ ಬ್ಯಾಟ್ಸ್‌ಮನ್ ಗಳು ನಾಯಕನ ನಿರೀಕ್ಷೆಗೆ ತಕ್ಕಂತೆ ಉತ್ತಮ ಪ್ರದರ್ಶನ ನೀಡಲಿಲ್ಲ.
ನಿತೀಶ್‌ಕುಮಾರ್ ರೆಡ್ಡಿ (41) ರನ್ ಕಲೆ ಹಾಕುವ ಭರವಸೆ ಹುಟ್ಟು ಹಾಕಿದರೂ ಉಳಿದವರು ನಿರಾಸೆ ಮೂಡಿಸಿದರು. ಜೈಸ್ವಾಲ್ ಮತ್ತು ಪಡಿಕ್ಕಲ್ ಡಕ್‌ಗೆ ಔಟಾದರು. ಕೊಹ್ಲಿ ಕೇವಲ 5 ರನ್ ಗಳಿಸಿ ನಿರಾಶೆ ಮೂಡಿಸಿದರು.
ಜೋಶ್ ಹೇಜಲ್ವುಡ್ ತಮ್ಮ ಶ್ರೇಷ್ಠ ಬೌಲಿಂಗ್ ಮೂಲಕ 4 ವಿಕೆಟ್ ಕಬಳಿಸಿದರು. ಉಳಿದಂತೆ ಮಿಚೆಲ್ ಸ್ಟಾರ್ಕ್, ಮಿಚೆಲ್ ಮಾರ್ಷ್, ಮತ್ತು ಪ್ಯಾಟ್ ಕಮ್ಮಿನ್ಸ್ ತಲಾ 2 ವಿಕೆಟ್ ಪಡೆದರು.








