ನವದೆಹಲಿ: ಮುಂಬರುವ ಐಪಿಎಲ್ ಟೂರ್ನಿ ಸೇರಿದಂತೆ ಮುಂಬರುವ ಮೂರು ಆವೃತ್ತಿಯ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ.
2026 ಹಾಗೂ 2027ರ ಸೀಸನ್ಗಳ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆಗೊಳಿಸಿದೆ. ಪ್ರತಿ ಬಾರಿ ಮುಂಬರುವ ವೇಳಾಪಟ್ಟಿಯನ್ನು ಮಾತ್ರ ಪ್ರಟಿಸಲಾಗುತ್ತಿತ್ತು. ಆದರೆ, ಈ ಬಾರಿ ಮೂರು ಸೀಸನ್ ಗಳ ವೇಳಾಪಟ್ಟಿ ಪ್ರಕಟಿಸಲಾಗಿದೆ. 2025ರ ಐಪಿಎಲ್ ಟೂರ್ನಿಯು ಮಾರ್ಚ್ 14ರಂದು ಪ್ರಾರಂಭವಾಗಿ ಮೇ 25ರವರೆಗೆ ನಡೆಯಲಿದೆ. ಈ ಬಾರಿಯ ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆ ಇದೇ ತಿಂಗಳ 24 ಹಾಗೂ 25 ರಂದು ನಡೆಯಲಿದೆ.
2026ರ ಟೂರ್ನಿಯು ಮಾರ್ಚ್ 15 ರಂದು ಪ್ರಾರಂಭವಾಗಿ ಮೇ 31 ರವರೆಗೆ ನಡೆಯಲಿದೆ. 2027ರ ಟೂರ್ನಿಯು ಮಾರ್ಚ್ 14 ರಂದು ಪ್ರಾರಂಭವಾಗಿ ಮೇ 30 ರವರೆಗೆ ನಡೆಯಲಿದೆ.








